Kodagu

ಕೋತೂರು ಶ್ರೀ ಕೃಷ್ಣ ಅಮ್ಮ ಕೊಡವ ಸಮಾಜ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘದವರು ಆಯೋಜಿಸಿದ ಕಕ್ಕಡ-18 ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

admincoorgdaily

ಕೋತೂರು ಶ್ರೀ ಕೃಷ್ಣ ಅಮ್ಮ ಕೊಡವ ಸಮಾಜ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘದವರು ಆಯೋಜಿಸಿದ ಕಕ್ಕಡ-18 ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ:ತಾಲೂಕಿನ‌ ಕೋತೂರು ಶ್ರೀ ಕೃಷ್ಣ ಅಮ್ಮ ಕೊಡವ ಸಮಾಜ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘದವರು ಆಯೋಜಿಸಿದ ಕಕ್ಕಡ-18 ಕಾರ್ಯಕ್ರಮದಲ್ಲಿ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿರುವ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮಕ್ಕೆ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ವಿಶೇಷವಾಗಿ ಕೊಡಗು ಮತ್ತು ದಕ್ಷಿಣ ಕನ್ನಡದಲ್ಲಿ ಬಹು ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿರುವ ಕಕ್ಕಡ 18ರ ವಿಶೇಷತೆಯನ್ನು ವಿವರಿಸಿದರು.

 ನಮ್ಮ ಹಿರಿಕರು ಆಚರಿಸಿಕೊಂಡು ಬಂದಿರುವ ಈ ಪದ್ಧತಿಯನ್ನು ನಮ್ಮ ಮುಂದಿನ ಪೀಳಿಗೆಗೂ ಬಳುವಳಿಯಾಗಿ ತಿಳಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿವರಿಸಿದ ಮಾನ್ಯ ಶಾಸಕರು, ಪ್ರಕೃತಿಯನ್ನು ಪೂಜಿಸುವ ಕೊಡಗಿನ ಜನತೆಗೆ ಈ ಹಬ್ಬ ಅತ್ಯಂತ ಮಹತ್ವದ್ದು ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಅಖಿಲ ಅಮ್ಮ ಕೊಡವ ಸಮಾಜದ ಅಧ್ಯಕ್ಷರಾದ ಬಾನಂದ ಪ್ರತ್ಯು, ಅಖಿಲ ಅಮ್ಮ ಕೊಡವ ವಿದ್ಯಾ ಅಭಿವೃದ್ಧಿ ಸಂಘದ ಅಧ್ಯಕ್ಷರು ಉಮೇಶ್ ಕೇಚಮಯ್ಯ ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.