Kodagu

ಕನಕೋತ್ಸವದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

admincoorgdaily

ಕನಕೋತ್ಸವದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಕನಕಪುರ:ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಸಾಂಪ್ರದಾಯಿಕ ಹಾಗೂ ಪಾರಂಪರಿಕ ಕನಕೋತ್ಸವದ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇತರ ಅತಿಥಿ ಗಣ್ಯರೊಂದಿಗೆ ಭಾಗವಹಿಸಿದರು. ಕನಕೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳು ನಡೆದು ಜನರನ್ನು ಆಕರ್ಷಿಸಿತು. ಈ ಸಂದರ್ಭದಲ್ಲಿ ಶ್ರೀ ವಚನಾನಂದ ಸ್ವಾಮೀಜಿ ರವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು, ಮಾಜಿ ಸಂಸದರಾದ ಶ್ರೀ ಡಿ.ಕೆ ಸುರೇಶ್ ರವರು ಮಾನ್ಯ ಪೊನ್ನಣ್ಣರವರನ್ನು ಸನ್ಮಾನಿಸಿದರು.