ಪ್ರಸಿದ್ಧ ಶ್ರೀ ಈಶ್ವರ ದೇವಸ್ಥಾನ ಹಾಗೂ ಇರ್ಪು ಶ್ರೀ ರಾಮೇಶ್ವರ ದೇವಸ್ಥಾನದ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Feb 16, 2026 - 10:18
 0  472
ಪ್ರಸಿದ್ಧ ಶ್ರೀ ಈಶ್ವರ ದೇವಸ್ಥಾನ ಹಾಗೂ ಇರ್ಪು ಶ್ರೀ ರಾಮೇಶ್ವರ ದೇವಸ್ಥಾನದ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ; ತಾಲೂಕಿನ ಶ್ರೀಮಂಗಲ ಸಮೀಪದ ಹೇರ್ಮಾಡು ಗ್ರಾಮದ ಪ್ರಸಿದ್ಧ ಶ್ರೀ ಈಶ್ವರ ದೇವಸ್ಥಾನ ಹಾಗೂ ಇರ್ಪು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಮಹಾ ಶಿವರಾತ್ರಿ ಪ್ರಯುಕ್ತ ವಾರ್ಷಿಕ ಉತ್ಸವದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ್ದರು.

 ಮಹಾಶಿವರಾತ್ರಿ ಪ್ರಯುಕ್ತ ನಾಡಿನಾದ್ಯಂತ ಆಚರಿಸುತ್ತಿರುವ ಜಾಗರಣೆ, ಭಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗೆಯೇ ಇಲ್ಲಿಗೆ ಭೇಟಿ ನೀಡಿದ ಸಂದರ್ಭ ಶಾಸಕರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಎಲ್ಲರಿಗೂ ಮಹದೇವ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿದೇರೀರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪೃಥ್ವಿ, ಉದಯ, ಪ್ರಭು, ಕಟ್ಟಿ ಕಾರ್ಯಪ್ಪ, ರವಿ, ಭವಿನ್, ಹೇರ್ಮಾಡು ಈಶ್ವರ ದೇವಸ್ಥಾನ ಅಧ್ಯಕ್ಷರು ಅರುಣ್,ಉಪಾಧ್ಯಕ್ಷರು ಮಲ್ಚೀರ ಅಪ್ಪಣ್ಣ, ಕಾರ್ಯದರ್ಶಿ ಬಾಚಿರಂಡ ಅಯ್ಯಪ್ಪ,ಚಿಟ್ಟಿಯಪ್ಪ, ಗೋಪಾಲ್, ಆಡಳಿತ ಮಂಡಳಿ ಸದಸ್ಯರು ಪಾಲ್ವಿನ್ ಪೂಣಚ್ಚ, ಬೊಜ್ಜಂಗಡ ಸುಬ್ರಮಣಿ, ಅನಿಲ್, ಪೆಮ್ಮಯ್ಯ,ಮಧು ದೇವಯ್ಯ, ಇರ್ಪು ರಾಮೇಶ್ವರ ದೇವಸ್ಥಾನದ ಆಡಳಿತ ಮಂಡಳಿ ವಿಷ್ಣು ಬೋಸು, ಚಂಗಪ್ಪ, ವನಿತಾ ಭೀಮಯ್ಯ, ಹ್ಯಾರಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0