ಸಚಿವರಾದ ಹೆಚ್.ಸಿ. ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ಪ್ರಗತಿಪರಶೀಲನಾ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Sep 1, 2026 - 10:48
 0  42
ಸಚಿವರಾದ ಹೆಚ್.ಸಿ. ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ಪ್ರಗತಿಪರಶೀಲನಾ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಮೈಸೂರು:ಪೌರಾಡಳಿತ ಸಚಿವರಾದ ಹೆಚ್.ಸಿ. ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಪ್ರಗತಿಪರಶೀಲಿನ ಸಭೆ ಮೈಸೂರಿನಲ್ಲಿ ಜರುಗಿತು.

ಈ ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ವರ್ಚುಲ್ ನಲ್ಲಿ ಭಾಗವಹಿಸಿ, ಕುಡಿಯುವ ನೀರು, ಸ್ವಚ್ಛತೆ, ಒಳಚರಂಡಿ, ರಸ್ತೆ , ಪುರಸಭೆ ಕಟ್ಟಡದ ಕಾಮಗಾರಿ ಮೂಲಸೌಕರ್ಯ ಅಭಿವೃದ್ಧಿ, ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯತಿ ಹಾಗೂ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿಗಳು ಮತ್ತು ಅಧಿಕಾರಿಗಳನ್ನು ಕೂಡಲೇ ನೇಮಕ ಮಾಡಬೇಕೆಂದು ಪ್ರಸ್ತಾಪಿಸಿದರು.

ಈ ಬೇಡಿಕೆಗಳಿಗೆ, ಮಾನ್ಯ ಸಚಿವರು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು. ಈ ಸಂದರ್ಭದಲ್ಲಿ ಪೌರಾಡಳಿತ ಇಲಾಖೆಯ ಉನ್ನತ ಅಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿಗಳಾದ ಸೋಮಶೇಖರ್, ವಿರಾಜಪೇಟೆ ಪೌರಾಡಳಿತ ಇಲಾಖೆಯ ಮುಖ್ಯ ಅಧಿಕಾರಿ ನಾಚಪ್ಪ, ಪೊನ್ನಂಪೇಟೆ ಮುಖ್ಯ ಅಧಿಕಾರಿ ಗೋಪಿ ಮುಂತಾದವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0