ಸದ್ಭಾವನಾ ದಿನಾಚರಣೆ: ಶಾಸಕ ಎ‌ಎಸ್ ಪೊನ್ನಣ್ಣ ಭಾಗಿ

ಸದ್ಭಾವನಾ ದಿನಾಚರಣೆ: ಶಾಸಕ ಎ‌ಎಸ್ ಪೊನ್ನಣ್ಣ ಭಾಗಿ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಆಧುನಿಕ ಭಾರತದ ನಿರ್ಮಾತೃ, ಮಾಜಿ‌ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ಆಚರಿಸಲ್ಪಡುವ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ‌ ರಜನೀಶ್ ಹಾಗೂ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರತಿಜ್ಞೆ ಸ್ವೀಕರಿಸಿದರು.