ಎಲ್.ಜೆ ಹಾವನೂರು ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಶಾಸಕ ಎಎಸ್ ಪೊನ್ನಣ್ಣ ಭಾಗಿ
ಬೆಂಗಳೂರು: ವಸಂತನಗರದಲ್ಲಿರುವ ಡಿ.ದೇವರಾಜು ಅರಸು ಭವನದಲ್ಲಿ ಆಯೋಜನೆಗೊಂಡ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವ ಸಂದರ್ಭದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಭಾಗವಹಿಸಿದರು.
ಈ ಸಮಾರಂಭದಲ್ಲಿ ಎಲ್.ಜೆ ಹಾವನೂರು ರವರ ಪ್ರತಿಮೆಯನ್ನು ಅನಾವರಣಗೊಳಿಸಿ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಹಾಗೂ ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
