ಎ.ಕೆ ಸುಬ್ಬಯ್ಯ ಜನ್ಮದಿನ;ಪುಷ್ಪ ನಮನ ಸಲ್ಲಿಸಿದ ಶಾಸಕ ಎಎಸ್ ಪೊನ್ನಣ್ಣ
admincoorgdaily

ಪೊನ್ನಂಪೇಟೆ:ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ತಂದೆಯವರಾದ ದಿವಂಗತ ಎ.ಕೆ ಸುಬ್ಬಯ್ಯರವರ ಜನ್ಮದಿನದಂದು ಅವರ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಶಾಸಕರ ಶಾಸಕರ ಮಾತೃಶ್ರೀ ಪೊನ್ನಮ್ಮ ಸುಬ್ಬಯ್ಯ ಅವರ ಸಮಾಧಿಗೂ ಪುಷ್ಪ ನಮನ ಸಲ್ಲಿಸಿ ವಂದಿಸಲಾಯಿತು. ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ವಲಯ ಅಧ್ಯಕ್ಷರಾದ ಚಂಗುಲಂಡ ಸೂರಜ್, ಪಕ್ಷದ ಮುಖಂಡರು ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಯುವ ಕಾಂಗ್ರೆಸ್ ನಾ ರೀಕ್ಷಿತ್ ಕಾರ್ಯಪ್ಪ, ಭವಿನ್, ಸೌರಭ್ ಸುಬ್ಬಯ್ಯ, ಮಾನ್ಯ ಶಾಸಕರ ಸಿಬ್ಬಂದಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು