ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎಎಸ್ ಪೊನ್ನಣ್ಣ

Dec 23, 2025 - 10:29
 0  211
ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎಎಸ್ ಪೊನ್ನಣ್ಣ

ಸಂಪಾಜೆ:ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ನೂತನ ಕಾಮಗಾರಿಗೆ ಭೂಮಿ ಪೂಜೆಯನ್ನು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

   ಮೊದಲಿಗೆ ಸಂಪಾಜೆಯ ಕೂಟೇಲು ಭಾಗದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆ ಮಾಡಿದ ಬಳಿಕ, ಕಲ್ಯಾಳ ಹಾಗೂ ಎಸ್ಟೇಟ್ ಭಾಗದ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು.

   ಬಡಿಕ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೊಯಿನಾಡು ಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ತಡೆಗೋಡೆಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಸಂಪಾಜೆ ವಲಯ ಅಧ್ಯಕ್ಷರು ಸುರೇಶ್, ಚೆoಬು ವಲಯ ಅಧ್ಯಕ್ಷರು ರವಿರಾಜ್ ಹೊಸೂರು, ಪೆರಾಜೆ ವಲಯ ಅಧ್ಯಕ್ಷರು ಜೈರಾಮ್ ಪೆರುಮುಂಡ, ಸೂರಜ್ ಹೊಸೂರು, ಆಪ್ರು ರವೀಂದ್ರ, ಮೋಹಿದಿನ್, ವಿಜಕುಮಾರ್, ಹನೀಫ್, ರಾಜೇಶ್ವರಿ, ರೀತಿನ್, ತಿಮ್ಮಪ್ಪ, ಸುಂದರ, ಗಣಪತಿ, ಮೋಹನ್, ಪದ್ಮನಾಭ, ಉದಯ, ನವೀನ್, ಸೋಮಣ್ಣ, ಸುಧಾ, ಶಿವರಾಮ್, ಮನು ಪೆರುಮುಂಡ, ತುಳಸಿ, ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0