ಕೆದಮುಳ್ಳೂರುವಿನಲ್ಲಿ 16.83 ಕೋಟಿ ಅನುದಾನದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿ ಪೂಜೆ

Jan 11, 2026 - 09:53
 0  362
ಕೆದಮುಳ್ಳೂರುವಿನಲ್ಲಿ 16.83 ಕೋಟಿ ಅನುದಾನದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿ ಪೂಜೆ

ವಿರಾಜಪೇಟೆ : ಕೆದಮುಳ್ಳೂರಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡಗಳ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು, ಒಟ್ಟು ₹ 16.83 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಮೊರಾರ್ಜಿ ದೇಸಾಯಿ ಶಾಲೆ ಹೆಸರು ಮಾಡಿದೆ. ಇಲ್ಲಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಅನೇಕ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದೆ. ಈ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ವಿದ್ಯಾರ್ಜನೆ ಮಾಡಲು ಬರುವ ಮಕ್ಕಳಿಗೆ ಅನುಕೂಲ ಆಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಕೆಡಿಪಿ ಸದಸ್ಯರು ಮಾಳೇಟೀರ ಪ್ರಶಾಂತ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು ವಿಜಯ, ಹರೀಶ್, ಕುಂಡಚ್ಚಿರ ಮಂಜು ದೇವಯ್ಯ, ಕಾಳಿಮಾಡ ದೀಪು, ಚೆಕು, ಅನಿಲ್, ಪುರಸಭೆ ಮಾಜಿ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಕ್ಷಿತ್, ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶಬೀರ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0