ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ‌ ಆರೋಗ್ಯ ವಿಚಾರಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ‌ ಆರೋಗ್ಯ ವಿಚಾರಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ ಪುರಸಭೆ ಸ್ಥಾಯಿ‌‌ ಸಮಿತಿ ಅಧ್ಯಕ್ಷ ಜಲೀಲ್ ಅವರ ಆರೋಗ್ಯ ‌ವಿಚಾರಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು‌ ಇಂದು ಮುಂಜಾನೆ ವಿರಾಜಪೇಟೆಯ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು. ವಿರಾಜಪೇಟೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಲೀಲ್ ರವರು ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿದ್ದು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಮಾನ್ಯ ಶಾಸಕರು ಬಳಿಕ ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.