ಬಾಡಗರಕೇರಿ ಮೃತ್ಯುಂಜಯ ದೇವಸ್ಥಾನಕ್ಕೆ ಶಾಸಕ ಎಎಸ್ ಪೊನ್ನಣ್ಣ ಭೇಟಿ

ಬಾಡಗರಕೇರಿ ಮೃತ್ಯುಂಜಯ ದೇವಸ್ಥಾನಕ್ಕೆ ಶಾಸಕ ಎಎಸ್ ಪೊನ್ನಣ್ಣ ಭೇಟಿ

ಪೊನ್ನಂಪೇಟೆ :ತಾಲೂಕಿನ ಬಾಡಗರಕೇರಿ ಗ್ರಾಮದ ಪ್ರಸಿದ್ಧ ಮೃತ್ಯುಂಜಯ ದೇವಸ್ಥಾನಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ಶಾಸಕರ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಹಿಂದೆಯೂ ಸಹ ಹಲವಾರು ಬಾರಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು, ಅತ್ಯಂತ ಧಾರ್ಮಿಕ ಇರುವ ಮೃತ್ಯುಂಜಯ ಸ್ವಾಮಿಯು ನಾಡಿನ ಎಲ್ಲರಿಗೂ ಸುಭಿಕ್ಷೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಮಾನ್ಯ ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.