ಆರೋಗ್ಯ ಸಚಿವ ಯು. ಟಿ ಖಾದರ್ ಭೇಟಿ ಮಾಡಿದ ಶಾಸಕ ಡಾ ಮಂತರ್ ಗೌಡ
admincoorgdaily

ಮಂಗಳೂರು; ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಯು.ಟಿ ಖಾದರ್ ರವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಡಾ.ಮಂತರ್ ಗೌಡ ರವರು ಭೇಟಿ ಮಾಡಿ ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಆಸ್ಪತ್ರೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಅಭಿವೃದ್ಧಿಗೆ ಸಹಕಾರ ಕೋರಿದರು.