ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಯುಜಿಡಿ ಕೇಬಲ್ ವ್ಯವಸ್ಥೆ ಶೀಘ್ರವೇ ಕಲ್ಪಿಸುವಂತೆ ಸದನದಲ್ಲಿ ಆಗ್ರಹಿಸಿದ ಶಾಸಕ ಡಾ.ಮಂತರ್ ಗೌಡ

Mar 12, 2026 - 14:36
 0  273
ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಯುಜಿಡಿ ಕೇಬಲ್ ವ್ಯವಸ್ಥೆ ಶೀಘ್ರವೇ ಕಲ್ಪಿಸುವಂತೆ ಸದನದಲ್ಲಿ ಆಗ್ರಹಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ;ನಗರಸಭೆ ವ್ಯಾಪ್ತಿಯಲ್ಲಿ ಮಳೆಹಾನಿಯಿಂದಾಗಿ ವಿದ್ಯುತ್ ಸಂಪರ್ಕದಲ್ಲಿ ಅನಾನುಕೂಲಗಳಾಗುತ್ತಿರುವ ಬಗ್ಗೆ ಸದನದಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ರವರು ಯುಜಿಡಿ ಕೇಬಲ್ ವ್ಯವಸ್ಥೆ ಶೀಘ್ರವೇ ಕಲ್ಪಿಸಿ ಮಳೆಗಾಲದಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಮುಕ್ತಿ ನೀಡುವಂತೆ ಇಂಧನ ಸಚಿವರ ಗಮನ ಸೆಳೆದರು.

 ಹಾಗೂ ಅಮೃತ್ 2 ನೀರಿನ ವ್ಯವಸ್ಥೆ ಕಾಮಗಾರಿಯ ಜೊತೆ ಜೊತೆಗೆ ಯುಜಿಡಿ ಕೇಬಲ್ ಅಳವಡಿಕೆಗೆ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಉತ್ತರ ನೀಡಿ ಈ ವರ್ಷವೇ ಕ್ರಮ ಕೈಗೊಳ್ಳಲು ಆದೇಶ ನೀಡಲಾಗುವುದೆಂದು ಸದನಕ್ಕೆ ಉತ್ತರಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0