ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹುತಾತ್ಮ ಯೋಧ ದಿವಿನ್ ರವರ ಹೆಸರು ನಾಮಕರಣ ಮಾಡಲು ಆರೋಗ್ಯ ಸಚಿವರಿಗೆ ಮನವಿ ಮಾಡಿದ ಶಾಸಕ ಡಾ.ಮಂತರ್ ಗೌಡ
ಸೋಮವಾರಪೇಟೆ:ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೇನಾ ವಾಹನ ಅವಘಡಕ್ಕೆ ಒಳಗಾಗಿ ಹುತಾತ್ಮರಾದ ಭಾರತೀಯ ಸೇನೆಯ ಯೋಧ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ದಿವಿನ್ ರವರ ಸ್ಮರಣಾರ್ಥ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿವಿನ್ ರವರ ಹೆಸರು ನಾಮಕರಣ ಮಾಡಬೇಕೆಂದು ಶಾಸಕ ಡಾ.ಮಂತರ್ ಗೌಡ ರವರು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ ಬಿ ಸತೀಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ ಪಿ ಶಶಿಧರ್ ರವರು ಹಾಗೂ ಇತರರು ಉಪಸ್ಥಿತರಿದ್ದರು.