ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಮುಖಂಡ ಅಣ್ಣಪ್ಪ ಅವರ ಆರೋಗ್ಯ ವಿಚಾರಿಸಿದ ಶಾಸಕ ಡಾ.ಮಂತರ್ ಗೌಡ
admincoorgdaily

ಮಡಿಕೇರಿ;ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಬಜೆಗುಂಡಿ ಬೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪ್ರಮುಖರಾದ ಅಣ್ಣಪ್ಪ ರವರನ್ನು ಶಾಸಕರಾದ ಡಾ.ಮಂತರ್ ಗೌಡ ರವರು ಸೋಮವಾರ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಸೂಕ್ತ ಚಿಕಿತ್ಸಾ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಕೆ ಎ ಯಾಕುಬ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿ ಜಿ ಮೋಹನ್, ಬಜೆಗುಂಡಿ ಬೂತ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಹಾಗೂ ಇತರರು ಉಪಸ್ಥಿತರಿದ್ದರು.