Kodagu

20ಲಕ್ಷ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಡಾ.ಮಂತರ್ ಗೌಡ

admincoorgdaily

20ಲಕ್ಷ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಡಾ.ಮಂತರ್ ಗೌಡ

ಕುಶಾಲನಗರ,ಜೂಂ೯: ಕೂಡುಮಂಗಳೂರು ಗ್ರಾ.ಪಂ ನ ನವಗ್ರಾಮದಲ್ಲಿ ೨೦ ಲಕ್ಷ ರೂ ವೆಚ್ಚದ ಕಾಮಗಾರಿ ಶಾಸಕರಾದ ಡಾ.ಮಂತರ್ ಗೌಡರವರು ಗುದ್ದಲಿ ಪೂಜೆ ನೆರವೇರಿಸಿದರು. 

ನವಗ್ರಾಮದಲ್ಲಿ ೨೦ ಲಕ್ಷ ರೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರು, ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಕಳೆದ ಬಾರಿ ಗುದ್ದಲಿ ಪೂಜೆ ನೆರವೇರಿಸಿದ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. 

ನಂತರ ಮಾತನಾಡಿದ ಶಾಸಕರು, ಇದೇ ಮೊದಲ ಬಾರಿಗೆ ನವಗ್ರಾಮದಲ್ಲಿ ಎರಡು ಬಾರಿ ಗುದ್ದಲಿಪೂಜೆ ನೆರವೇರಿಸಲಾಗಿದೆ. ಜನರ ಸಮಸ್ಯೆಗಳನ್ನು ಅರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದೆಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. 

ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಕೆ.ಕೆ.ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಇದ್ದರು.