Kodagu

ನವಗ್ರಾಮದಲ್ಲಿ 25 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಡಾ.ಮಂತರ್ ಗೌಡ

admincoorgdaily

ನವಗ್ರಾಮದಲ್ಲಿ 25 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಡಾ.ಮಂತರ್ ಗೌಡ

ಕುಶಾಲನಗರ,ಫೆ೧: ಕೂಡುಮಂಗಳೂರು ಗ್ರಾ.ಪಂ ನ ಕೂಡ್ಲೂರು ನವಗ್ರಾಮದಲ್ಲಿ 25 ಲಕ್ಷ ರೂ ವೆಚ್ವದ ಕಾಮಗಾರಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡರವರು ಗುದ್ದಲಿಪೂಜೆ ನೆರವೇರಿಸಿದರು. ನವಗ್ರಾಮದ ಅಂಗನವಾಡಿ ಮುಂಭಾಗದಿಂದ ರೂ ೨೫ ಲಕ್ಷ ರೂಗಳ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದ್ದಾರೆ.

ಗ್ರಾಮಸ್ಥರ ಬೇಡಿಕೆ ಮೇರೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕಾಂಗ್ರೆಸ್ ಮುಖಂಡರಾದ ಕೆ.ಕೆ.ಮಂಜುನಾಥ್, ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ಪಿಡಿಓ ಸಂತೋಷ್, ಗ್ರಾಮದ ಪ್ರಮುಖರು, ಗ್ರಾಮಸ್ಥರು ಇದ್ದರು.