1 ಕೋಟಿ ವೆಚ್ಚದ ಗ್ರಂಥಾಲಯಕ್ಕೆ ಶಾಸಕ ಡಾ. ಮಂತರ್ ಗೌಡರಿಂದ ಶಂಕುಸ್ಥಾಪನೆ

Jul 14, 2026 - 12:00
 0  372
1 ಕೋಟಿ ವೆಚ್ಚದ ಗ್ರಂಥಾಲಯಕ್ಕೆ ಶಾಸಕ ಡಾ. ಮಂತರ್ ಗೌಡರಿಂದ ಶಂಕುಸ್ಥಾಪನೆ

ಕುಶಾಲನಗರ: ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಗ್ರಂಥಾಲಯ ಕಟ್ಟಡಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,"ಶಿಕ್ಷಣವೇ ಒಂದು ಸಮಾಜದ ಪ್ರಗತಿಗೆ ಅಡಿಪಾಯ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಪುಸ್ತಕಗಳು ಮತ್ತು ಅಧ್ಯಯನಕ್ಕೆ ಪೂರಕ ವಾತಾವರಣ ಸಿಗಬೇಕು ಎಂಬ ಉದ್ದೇಶದಿಂದಲೇ ಈ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಕುಶಾಲನಗರದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು"ಎಂದು ಹೇಳಿದರು. ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಸಾವಿರಾರು ಕೋಟಿ ರೂ. ಅನುದಾನ ತರಲಾಗಿದೆ. ಅದರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕುಶಾಲನಗರ ತಾಲ್ಲೂಕಿನ ಪ್ರತಿ ಕಾಲೇಜು, ಶಾಲೆಗಳನ್ನು ಮಾದರಿ ಸಂಸ್ಥೆಗಳನ್ನಾಗಿ ರೂಪಿಸುವುದು ನಮ್ಮ ಸಂಕಲ್ಪ. ಕಾಂಗ್ರೆಸ್ ಸರ್ಕಾರವು ಯುವಕರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಬದ್ಧವಾಗಿದೆ" ಎಂದು ಅವರು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, "ಶಾಸಕ ಡಾ. ಮಂತರ್ ಗೌಡರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗ ಪಡೆದಿವೆ. ಗ್ರಂಥಾಲಯದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ" ಎಂದು ಹೇಳಿದರು. ಕೆ.ಪಿ ಚಂದ್ರಕಲಾ. ಯೋಜನ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ. ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ರಂಜನ ಹೆಬ್ಬಾಲೆ ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0