ಸಿ&ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಡಾ.ಮಂತರ್ ಗೌಡ

ಸಿ&ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು  ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರು: ಕೊಡಗು ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಿ ಮತ್ತು ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಶಾಸಕರಾದ ಡಾ.ಮಂತರ್ ಗೌಡ ಅವರು ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ನಮ್ಮ ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜಿಲ್ಲೆಯ ರೈತರು ಕೃಷಿಕರ ಆತಂಕವನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದು ಕೆಲವೊಂದು ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಕಾನೂನಾತ್ಮಕವಾಗಿಯೇ ಬಗೆಹರಿಸಬೇಕಾಗುತ್ತದೆ.ಎಲ್ಲಾ ಅಂಶಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಕೊಟ್ಟಿದ್ದು ಸಮಸ್ಯೆ ಶೀಘ್ರವೇ ಬಗೆಹರಿಯುವ ವಿಶ್ವಾಸವಿದೆ.ಹಾಗೂ ಈ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.