Kodagu

ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ

admincoorgdaily

ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ ಕರ್ನಾಟಕ ರಾಜ್ಯ ಸರ್ಕಾರದ ನೂತನ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಈಶ್ವರ ಖಂಡ್ರೆ ರವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರು ಭೇಟಿ ಮಾಡಿ ಅಭಿನಂದನೆಗಳನ್ನು ಅರ್ಪಿಸಿದರು.

ಇದೇ ಸಂಧರ್ಭದಲ್ಲಿ ಶನಿವಾರ ಸಂತೆಯಲ್ಲಿ ಆಯೋಜಿಸಲಾಗಿರುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಕೂಡ ಆಗಿರುವ ಸಚಿವ ಈಶ್ವರ ಖಂಡ್ರೆ ರವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು. 

ಈ ಸಂಧರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ  ಚಂದ್ರಮೌಳಿ, ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರಿ ಜಿ ಎಂ ಕಾಂತರಾಜು, ಸೋಮವಾರಪೇಟೆ ತಾಲ್ಲೂಕು ಕೆ ಡಿ ಪಿ ಸದಸ್ಯರಾದ ಶರತ್ ಶೇಖರ್, ಮುಖಂಡರಾದ ಧರ್ಮಪ್ಪ,ಕೂಡಾ ಅಧ್ಯಕ್ಷರಾದ ಶ್ರೀ ಪ್ರಮೋದ್ ಮುತ್ತಪ್ಪ, ಕೆ ಪಿ ಸಿ ಸಿ ಸದಸ್ಯರಾದ ಶ್ರಿ ಮಂಜುನಾಥ್ ಗುಂಡೂರಾವ್ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಜೋಸೆಫ್ ಸೋನ್ಸ್ ಉಪಸ್ಥಿತರಿದ್ದರು .