ಕರ್ನಾಟಕ ವಿಧಾಸಭೆಯ ಅರ್ಜಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

Oct 16, 2025 - 15:26
 0  312
ಕರ್ನಾಟಕ ವಿಧಾಸಭೆಯ ಅರ್ಜಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ‌ ಡಾ.ಮಂತರ್ ಗೌಡ ಅವರು ಭಾಗವಹಿಸಿದರು.

ಸಭೆಯಲ್ಲಿ ಕೊಡಗು ಜಿಲ್ಲೆಯ ಸರ್ಕಾರಿ ಪೈಸಾರಿ ಜಮೀನನ್ನು ಸಿ ಮತ್ತು ಡಿ ಜಮೀನೆಂದು ವರ್ಗೀಕರಿಸಿ ಗೊಂದಲಗಳನ್ನು ಸರಿಪಡಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡುವ ಕುರಿತು, ವಡೆಯನಪುರ ಗ್ರಾಮದ ಸರ್ವೇ ನಂ 124/1 ರಲ್ಲಿ ವಾಸವಿರುವ 200 - 250 ಕುಟುಂಬಗಳಿಗೆ 94/ಸಿ ಅಡಿಯಲ್ಲಿ ಹಕ್ಕುಪತ್ರ ನೀಡುವi ಕುರಿತು,ನಮುನೆ - 57 ರ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಮಂಜೂರು ಮಾಡುವ ಕುರಿತು ಚರ್ಚಿಸಲಾಯಿತು.

 ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸದಸ್ಯರಾದ ಡಾ. ಮಂತರ್ ಗೌಡ ರವರು ಸೂಕ್ತ ಕ್ರಮ ಕೈಗೊಳ್ಳಲು ಸಭೆಯಲ್ಲಿ ಆಗ್ರಹಿಸಿದರು. ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಕೃಷ್ಣಮೂರ್ತಿ, ಕಂದಾಯ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0