ಗ್ರಾಮೀಣ ಭಾಗದ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ 1.20 ಕೋಟಿ ಅನುದಾನ ಒದಗಿಸಿದ ಶಾಸಕರಾದ ಡಾ.ಮಂತರ್ ಗೌಡ:ತಲಾ 10 ಲಕ್ಷ ರೂಪಾಯಿ ಅನುದಾನದಲ್ಲಿ 12 ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಯಡೂರುನಲ್ಲಿ ಭೂಮಿ ಪೂಜೆ

Mar 15, 2026 - 13:54
 0  348
ಗ್ರಾಮೀಣ ಭಾಗದ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ 1.20 ಕೋಟಿ ಅನುದಾನ ಒದಗಿಸಿದ ಶಾಸಕರಾದ ಡಾ.ಮಂತರ್ ಗೌಡ:ತಲಾ 10 ಲಕ್ಷ ರೂಪಾಯಿ ಅನುದಾನದಲ್ಲಿ 12 ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಯಡೂರುನಲ್ಲಿ ಭೂಮಿ ಪೂಜೆ

ಸೋಮವಾರಪೇಟೆ; ಸುಗ್ಗಿ ಕಟ್ಟೆಗಳ ಅಭಿವೃದ್ಧಿಗೆ ಸರ್ಕಾರದಿಂದ ರೂ. 1.20 ಕೋಟಿ ಅನುದಾನವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಒದಗಿಸುವ ಮೂಲಕ ಸಾಂಸ್ಕೃತಿಕ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ.ಇದೇ ಪ್ರಥಮ ಬಾರಿಗೆ ಎಂಬಂತೆ ಗ್ರಾಮೀಣ ಭಾಗದಲ್ಲಿರುವ ಸುಗ್ಗಿ ಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ಅನುದಾನ ಒದಗಿಸಲಾಗಿದೆ.

ತಾಲೂಕಿನ ನಗರಳ್ಳಿ, ಕೂತಿ, ತೋಳೂರುಶೆಟ್ಟಳ್ಳಿ, ಕುಮಾರಳ್ಳಿ ಬಾಚಳ್ಳಿ, ಶಾಂತಳ್ಳಿ-ತಲ್ತರೆಶೆಟ್ಟಳ್ಳಿ, ಹಾನಗಲ್ಲು ಶೆಟ್ಟಳ್ಳಿ, ಯಡೂರು, ಚೌಡ್ಲು, ಕೊಡ್ಲಿಪೇಟೆ, ದುಂಡಳ್ಳಿ-ಮಾದ್ರೆ, ವಾಲ್ನೂರು-ತ್ಯಾಗತ್ತೂರು, ತಾಕೇರಿ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷದಂತೆ ಒಟ್ಟು 1.20 ಕೋಟಿ ಅನುದಾನ ಒದಗಿಸಿದ್ದು, ಯಡೂರು ಸುಗ್ಗಿ ಕಟ್ಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಬಿ ಬಿ ಸತೀಶ್, ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಕೆ ಎಂ ಲೋಕೇಶ್, ಸೋಮವಾರಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಜಾನಕಿ ವೆಂಕಟೇಶ್ ಹಾಗೂ ಸುಗ್ಗಿಕಟ್ಟೆ ಸಮಿತಿಗಳ ಅಧ್ಯಕ್ಷರು, ಪ್ರಮುಖರು ಗ್ರಾಮಸ್ಥರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0