Kodagu

ಮಡಿಕೇರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಡಾ.ಮಂತರ್ ಗೌಡ

admincoorgdaily

ಮಡಿಕೇರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ:ಕರ್ನಾಟಕ ವಿಧಾನಸಭಾ ಅಧಿವೇಶದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಬೆಳಕು ಚೆಲ್ಲಿದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು, ಲೋಕೋಪಯೋಗಿ ಇಲಾಖೆ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಬೇಕು, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು, ಹೆಚ್ಚಿನ ಮಳೆಯಿಂದ ಮನೆ ಹಾನಿಯಾಗಿರುವ ಕುಟುಂಬದವರಿಗೆ ಪರಿಹಾರ ನೀಡುವಂತಾಗಬೇಕು ಎಂದು ವಿವಿಧ ವಿಷಯಗಳ ಕುರಿತು ಸದನದಲ್ಲಿ ಪ್ರಸ್ತಾಪಿಸಿ ಗಮನ ಸೆಳೆದರು.