SSLC ಹಾಲ್ ಟಿಕೆಟ್ ವಂಚಿತ ವಿದ್ಯಾರ್ಥಿಯರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟ ಶಾಸಕ ಪೊನ್ನಣ್ಣ

Mar 21, 2026 - 16:27
 0  972
SSLC ಹಾಲ್ ಟಿಕೆಟ್ ವಂಚಿತ ವಿದ್ಯಾರ್ಥಿಯರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟ ಶಾಸಕ ಪೊನ್ನಣ್ಣ

ಮಡಿಕೇರಿ:ತಾಲೂಕಿನ ಬೆಟ್ಟಗೇರಿಯ ಉದಯ ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿದ ಇಬ್ಬರು ವಿದ್ಯಾರ್ಥಿಗಳಿಗೆ SSLC ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸಲ್ಪಟ ವಿಷಯ ರಾಜ್ಯಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಪೋಷಕರು ಹಾಗೂ ವಿದ್ಯಾರ್ಥಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಉದಯ ಶಾಲೆಗೆ ಸರಕಾರಿ ಮಾನ್ಯತೆ ಇಲ್ಲದೆ ಇರುವುದರಿಂದ ಹಾಲ್ ಟಿಕೆಟ್ ನಿರಾಕರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದರು

. ಮಕ್ಕಳ ವಿದ್ಯಾಭ್ಯಾಸದ ಭವಿಷ್ಯಕ್ಕೆ ತೊಡಕಾಗಬಾರದೆಂದು ವಿಷಯ ತಿಳಿದ ಮಾನ್ಯ ಶಾಸಕರು ಬೆಂಗಳೂರಿನ ಕಮಿಷನರ್ ಮಟ್ಟದಲ್ಲಿ ಮಾತನಾಡಿ ಸೋಮವಾರದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಾಸಕ ಎಎಸ್ ಪೊನ್ನಣ್ಣ ಅವರು ಅನುವು ಮಾಡಿಕೊಟ್ಟಿದ್ದಾರೆ.ಇಂದು ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಶಾಸಕರನ್ನು ಭೇಟಿಯಾಗಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1