SIR ನಲ್ಲಿ ಶಾಸಕ ಪೊನ್ನಣ್ಣ ಭಾಗಿ: ಮತದಾರರ ಪಟ್ಟಿ ಪರಿಷ್ಕರಣೆಗೆ ಕರೆ

Jul 5, 2026 - 13:12
 0  232
SIR ನಲ್ಲಿ ಶಾಸಕ ಪೊನ್ನಣ್ಣ ಭಾಗಿ: ಮತದಾರರ ಪಟ್ಟಿ ಪರಿಷ್ಕರಣೆಗೆ ಕರೆ

ವಿರಾಜಪೇಟೆ: ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ - SIR ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಭಾಗವಹಿಸಿದರು. ಪೊನ್ನಂಪೇಟೆ ತಾಲೂಕು ಹುದಿಕೇರಿ ಗ್ರಾಮದ ಬೆಳ್ಳೂರಿನಲ್ಲಿರುವ ಶಾಸಕರ ನಿವಾಸದಲ್ಲಿ SIR ಅರ್ಜಿ ಭರ್ತಿ ಮಾಡುವ ಮೂಲಕ ಅವರು ಈ ಪ್ರಕ್ರಿಯೆಗೆ ಚಾಲನೆ ನೀಡಿದರು.

ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಶಾಸಕರು, "ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇರಲೇಬೇಕು. ಮತದಾನ ಎಂಬುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪ್ರಮುಖ ಹಕ್ಕು. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಯಾರೂ ಇದನ್ನು ಕಸಿದುಕೊಳ್ಳದಂತೆ ನಾವು ಜಾಗೃತಿ ವಹಿಸಬೇಕು. ಹಾಗಾಗಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ನೀಡಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ" ಎಂದು ಕರೆ ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0