ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡ ಪಟ್ಟಡ ಭರತ್ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶಾಸಕ ಪೊನ್ನಣ್ಣ

Feb 14, 2026 - 09:29
 0  939
ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡ ಪಟ್ಟಡ ಭರತ್ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶಾಸಕ ಪೊನ್ನಣ್ಣ

ಮಡಿಕೇರಿ; ಆನೆ ದಾಳಿಗೆ ಸಿಲುಕಿ ಗಾಯಗೊಂಡು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಮದೆ ಗ್ರಾಮದ ಪಟ್ಟಡ ಭರತ್ ರವರ ಯೋಗಕ್ಷೇಮ ವಿಚಾರಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು.

 ಗಾಯಾಳು ಭರತ್ ರಿಗೆ ಧೈರ್ಯ ಹೇಳುತ್ತಾ ಘಟನೆಯ ಬಗ್ಗೆ ವಿವರ ಪಡೆದ ಶಾಸಕರು, ವೈದ್ಯರಲ್ಲಿ ಗಾಯದ ತೀವ್ರತ ಬಗ್ಗೆ ಮಾಹಿತಿ ಪಡೆದು, ಹೆಚ್ಚಿನ ಕಾಳಜಿ ವಹಿಸಿ ಇವರನ್ನು ಗುಣಮುಖರನ್ನಾಗಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರು ವೈಯುಕ್ತಿಕ ಧನ ಸಹಾಯ ನೀಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಡಿಸಿಸಿ ಪ್ರಧಾನ ಕಾರ್ಯದರ್ಶಿಯವರಾದ ಕೊಲ್ಯದ ಗಿರೀಶ್, ಸೂರಜ್ ಹೊಸೂರು, ಪಟ್ಟಡ ದೀಪಕ್, ಕೊಡಗನ ತೀರ್ಥ ಪ್ರಸಾದ್, ಪಟ್ಟಡ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0