ಶಾಸಕ ಪೊನ್ನಣ್ಣರಿಂದ ನಿಧನರಾದ ಕಾಂಗ್ರೆಸ್ ಮುಖಂಡರ ಮನೆಗೆ ಭೇಟಿ:ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ
ಮಡಿಕೇರಿ: ಇತ್ತೀಚೆಗೆ ನಿಧನರಾದ ಚೆಯ್ಯಂಡಾಣೆ ನರಿಯಂದಡ ಗ್ರಾಮದ ನಿವಾಸಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬೊವ್ವೇರಿಯಂಡ ರಾಜ ಸುಬ್ಬಯ್ಯ ಅವರ ಮನೆಗೆ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭ ಶಾಸಕರ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ನರಿಯಂದಡ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಐತಿಚಂಡ ಪ್ರಕಾಶ್ ಕಾರ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
1
Funny
0
Angry
0
Sad
0
Wow
0

