ಶಾಸಕ ಪೊನ್ನಣ್ಣನವರ ವಿಶೇಷ ಕಾಳಜಿ ಹಾಗೂ ಪ್ರಯತ್ನ : ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಬಡ ಕೂಲಿ ಕಾರ್ಮಿಕನಿಗೆ 4.50 ಲಕ್ಷ ರೂಪಾಯಿಗಳ ಮೇಲ್ಪಟ್ಟ ಉಚಿತ ಚಿಕಿತ್ಸೆ
ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿವಕುಮಾರ್ ಎಂಬ ಬಡ ಕೂಲಿ ಕಾರ್ಮಿಕ, ಕೆಲಸ ಮಾಡುವ ಸಂದರ್ಭ ಮರದಿಂದ ಬಿದ್ದು ಬೆನ್ನು ಮೂಳೆಗೆ ತೀವ್ರತರವಾದ ಗಾಯವಾಗಿತ್ತು. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎಜೆ ಆಸ್ಪತ್ರೆಯಲ್ಲಿ, ಬಿಪಿಎಲ್ ಕಾರ್ಡ್ ಗೆ ಉಚಿತ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಚಿಕಿತ್ಸೆ ನೀಡಲು ನಿರಾಕರಿಸಲಾಯಿತು.
ಆ ಸಂದರ್ಭದಲ್ಲಿ ಗಂಭೀರ ಆರೋಗ್ಯ ಪರಿಸ್ಥಿತಿಯಲ್ಲಿದ್ದ ಶಿವಕುಮಾರ್ ರವರ ಸಮಸ್ಯೆಯ ಬಗ್ಗೆ, ಮನೆಯವರು ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಗಮನಕ್ಕೆ ತಂದರು. ಕೂಡಲೇ, ಶಾಸಕರು ಸರಕಾರದ ಮಟ್ಟದಲ್ಲಿ ಮಾತನಾಡಿ ಆರೋಗ್ಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರೆಟರಿ ಅವರೊಂದಿಗೆ ಚರ್ಚಿಸಿ, ಶಿವಕುಮಾರ್ ರವರಿಗೆ ಬಿಪಿಎಲ್ ಕಾರ್ಡ್ ಮೂಲಕ ಉಚಿತ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಿದ್ದಾರೆ.
ತನ್ನ ಕ್ಷೇತ್ರದ ಜನತೆಯ ಸುರಕ್ಷತೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಶಾಸಕರಿಗೆ ಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿರುವ ಶಿವಕುಮಾರ್ ಹಾಗೂ ಕುಟುಂಬದವರು ನೇರವಾಗಿ ಶಾಸಕರ ಮನೆಗೆ ಬಂದು ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಶಾಸಕರ ಈ ಜನಪರ ಕಾಲೇಜಿಗೆ ಜನ ವಲಯದಲ್ಲಿ ವ್ಯಾಪಕ ಪ್ರಶಂಸೆ ಹಾಗೂ ಧನ್ಯತಾಭಾವ ವ್ಯಕ್ತವಾಗಿದೆ.
ಈ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದು ಶಿವಕುಮಾರ್ ರವರಿಗೆ ಉಚಿತ ಚಿಕಿತ್ಸೆ ನೀಡಲು ಸಹಕರಿಸಿದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ ಹಾಗೂ ಶಾಸಕರ ವಿನಂತಿಯಂತೆ, ಶಾಸಕರ ಸಹಕಾರವನ್ನು ಪಡೆದುಕೊಂಡು, ವೈದ್ಯರೊಂದಿಗೆ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ ಅದರ ಹಿಂದೆ ಬೆಂಬಿಡದೆ ಶ್ರಮಪಟ್ಟು ಶಿವಕುಮಾರ್ ಅವರಿಗೆ ಉಚಿತ ಚಿಕಿತ್ಸೆ ನೀಡಲು ಆರೋಗ್ಯದ ತುರ್ತು ಪರಿಸ್ಥಿತಿಗಳಲ್ಲಿ ಸೇವೆ ಮಾಡುತ್ತಾ ಬಂದಿರುವ ಸಾಮಾಜಿಕ ಕಾರ್ಯಕರ್ತರಾದ ಚೋಕಂಡ ಸಂಜು ಸುಬ್ಬಯ್ಯ, ಶಾಸಕರ ಆಪ್ತರಾದ ಕುಂಡಚ್ಚಿರ ಮಂಜು ದೇವಯ್ಯ ಹಾಗೂ ಸಹಕರಿಸಿದ ಎಲ್ಲಾ ಮುಖಂಡರಿಗೆ ಶಿವಕುಮಾರ್ ಹಾಗೂ ಅವರ ಕುಟುಂಬಸ್ಥರು ಮನದಾಳದ ಕೃತಜ್ಞತೆಗಳನ್ನು ಸಲ್ಲಿಸಿದಾರೆ.