ಶನಿವಾರಸಂತೆ;ವಿವಿಧೆಡೆ ಶಾಸಕರಿಂದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ

May 21, 2026 - 15:00
 0  222
ಶನಿವಾರಸಂತೆ;ವಿವಿಧೆಡೆ ಶಾಸಕರಿಂದ ಕಾಂಕ್ರೀಟ್ ರಸ್ತೆ  ಕಾಮಗಾರಿಗೆ ಭೂಮಿಪೂಜೆ

ಶನಿವಾರಸಂತೆ:ಮೇ21:-ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಶನಿವಾರಸಂತೆ ಮತ್ತು ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯ ವಿವಿಧ ಕಡೆಯಲ್ಲಿ ಕಾಂಕ್ರಿಟ್ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು

ಶನಿವಾರಸಂತೆ ಬೈಪಾಸ್ ರಸ್ತೆಯಲ್ಲಿರುವ ವ್ಯವಸಹಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಸೇರಿದ ಜಾಗದಲ್ಲಿ ಮುಖ್ಯಮಂತ್ರಿ ನಿಧಿಯಿಂದ ಬಿಡುಗಡೆಯಾದ 10 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆ ನಿರ್ಮಾಣ ಮತ್ತು ಕಾಂಕ್ರಿಟ್ ರಸ್ತೆ ಕಾಮಗಾರಿ, ಬೈಪಾಸ್ ರಸ್ತೆಯಿಂದ ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯ ಹೆಮ್ಮನೆ ಗ್ರಾಮಕ್ಕೆ ಹೋಗುವ 400 ಮೀಟರ್ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ 2025-26ನೇ ಸಾಲಿನ ಪರಿಶಿಷ್ಠ ಜನಾಂಗದವರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಉದ್ದೇಶದಿಂದ ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ 1 ಕೋಟಿ ರು ಮಂಜೂರಾಗಿರುವ ರಸ್ತೆ ಅಭಿವೃದ್ದಿ ಕಾಮಗಾರಿ, ಚಿಕ್ಕಕೊಳತ್ತೂರು ಗ್ರಾಮದ ಡಾಂಬರು ರಸ್ತೆ ಅಭಿವೃದ್ದಿಗೆ ಶಾಸಕರ ನಿಧಿಯಿಂದ 10 ಲಕ್ಷ ರು ಮಂಜುರಾಗಿರುವ ರಸ್ತೆ ಅಭಿವೃದ್ದಿ ಕಾಮಗಾರಿ, ಸಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ ಮೂಲಕವಾಗಿ ಹೋಗುವ ಚಿಕ್ಕಕೊಳತ್ತೂರು ಗ್ರಾಮದ ಕಾಂಕ್ರಿಟ್ ರಸ್ತೆ ಅಭಿವೃದ್ದಿಗೆ ಮುಖ್ಯಮಂತ್ರಿಗಳ ವಿಶೇಷ ಯೋಜನೆ ಅಡಿಯಲ್ಲಿ 20 ಲಕ್ಷ ರು ಮಂಜೂರಾಗಿರುವ ರಸ್ತೆ ಅಭಿವೃದ್ದಿ ಕಾಮಗಾರಿ ಈ ಎಲ್ಲಾ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ-ನಾನು ಶಾಸಕನಾಗಿದ್ದ ಪ್ರಾರಂಭದಲ್ಲೆ ಗ್ರಾಮೀಣ ರಸ್ತೆ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದೆ ಅದರಂತೆ ಸ್ವಲ್ಪ ವಿಳಂಬವಾದರೂ ಸಹ ಈ ಭಾಗದಲ್ಲಿ ಗ್ರಾಮೀಣ ರಸ್ತೆ ಅಭಿವೃದ್ದಿ, ಕಾಂಕ್ರಿಟ್ ರಸ್ತೆ ಅಭಿವೃದ್ದಿಗೆ ಅನುದಾನ ನೀಡಿ ನಾನು ಹೇಳಿದಂತೆಯೆ ರಸ್ತೆ ಅಭಿವೃದ್ದಿ ಕಾಮಗಾರಿ ಪೂರ್ಣಗೊಂಡಿದೆ ಉಳಿದಂತೆ ಹಂತಹAತವಾಗಿ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ದಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು, ರಸ್ತೆ ಅಭಿವೃದ್ದಿ ಕಾಮಗಾರಿ ಸಂದರ್ಭದಲ್ಲಿ ಸ್ಥಳೀಯರು ಮತ್ತು ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಯುವಂತೆ ಗಮನಹರಿಸಬೇಕು ಸಾರ್ವಜನಿಕರು ಮತ್ತು ಗ್ರಾಮಸ್ಥರು ಅಭಿವೃದ್ದಿ ವಿಚಾರದಲ್ಲಿ ಪಕ್ಷಾತೀತವಾಗಿ ಎಲ್ಲಾರೂ ಒಂದಾಗಿ ಕೈಜೋಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್, ತಾ.ಪಂ.ಮಾಜಿ ಅಧ್ಯಕ್ಷ ಲೋಕೇಶ್, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜನಾರ್ಧನ್ ಪ್ರಮುಖರಾದ ಶರತ್ ಶೇಖರ್, ಗಿರೀಶ್, ಆದಿತ್ಯ ಗೌಡ, ಅಶೋಕ್, ಬಿ.ಕೆ.ದಿನೇಶ್, ಕಿರಣ್, ನಾಗರಾಜ್, ಎಪಿಸಿಎಂಎಸ್ ಅಧ್ಯಕ್ಷ ಧರ್ಮಪ್ಪ, ಉಪಾಧ್ಯಕ್ಷ ಕುಮಾರ್ ನಾಯಕ್, ಸರೋಜ ಶೇಖರ್, ಅಬ್ಬಾಸ್, ಮಹಮದ್ ಖನ್ನ, ಮಂಜುನಾಥ್ ಮುಂತಾದವರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0