ಗೋಣಿಕೊಪ್ಪ;ಬಿಜೆಪಿ ವಿರಾಜಪೇಟೆ ಮಂಡಲ ಕಚೇರಿ ಲೋಕಾರ್ಪಣೆಗೊಳಿಸಿದ‌ ‌ಸಂಸದ ಯದುವೀರ್ ಒಡೆಯರ್

Jun 9, 2026 - 17:05
 0  316
ಗೋಣಿಕೊಪ್ಪ;ಬಿಜೆಪಿ ವಿರಾಜಪೇಟೆ ಮಂಡಲ ಕಚೇರಿ ಲೋಕಾರ್ಪಣೆಗೊಳಿಸಿದ‌ ‌ಸಂಸದ ಯದುವೀರ್ ಒಡೆಯರ್

ಗೋಣಿಕೊಪ್ಪ: ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ರಸ್ತೆಯಲ್ಲಿರುವ ಟಾಸ್ ಕಟ್ಟಡದಲ್ಲಿ ಭಾರತೀಯ ಜನತಾ ಪಾರ್ಟಿ ವಿರಾಜಪೇಟೆ ಮಂಡಲ ಕಚೇರಿಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಪಕ್ಷದ ಕಚೇರಿ ಉದ್ಘಾಟನೆಯೊಂದಿಗೆ ಪಕ್ಷದ ಬೆಳವಣಿಗೆಯ ಭಾವನೆ ಹೆಚ್ಚಾಗಬೇಕು. ಕೊಡಗು ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆ ದೃಷ್ಟಿಯಿಂದ ಹೆಚ್ಚು ಕಾರ್ಯಾಲಯಗಳ ಅವಶ್ಯಕತೆಯಿದೆ. ಮುಂಬರುವ ಚುನಾವಣೆಗಳನ್ನು ಎದುರಿಸಲು ಹಾಗೂ ಕಾರ್ಯತಂತ್ರಗಳನ್ನು ರೂಪಿಸಲು ಕಾರ್ಯಲಯಗಳು ಶಕ್ತಿ ತುಂಬಲಿದೆ ಎಂದು ಹೇಳಿದರು.

ಈ ಸಂದರ್ಭ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಎಂಎಲ್ಸಿ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ ಬೋಪಯ್ಯ,ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಉಪಾಧ್ಯಕ್ಷರುಗಳಾದ ಅರುಣ್ ಭೀಮಯ್ಯ, ಗುಮ್ಮಟ್ಟೀರ ಕಿಲನ್,ಜಿಲ್ಲಾ ಪ್ರ.ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1