ಗುಡ್ಡೆಹೊಸೂರು ಹಾಲು ಉತ್ಪಾದಕರ ಸಂಘಕ್ಕೆ ಸಂಸದ ಯದುವೀರ್ ಒಡೆಯರ್ ಭೇಟಿ
ಕುಶಾಲನಗರ; ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಗುಡ್ಡೆಹೊಸೂರಿನ ಹಾಲು ಉತ್ಪಾದಕರ ಸಹಕಾರ ಸಂಘ (MPCS) ದ ನೂತನ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಬಿ.ಎಂ. ಸಾಗರ್ ಅವರಿಂದ ಕಟ್ಟಡ ಕಾಮಗಾರಿ ಹಾಗೂ ಹೈನುಗಾರರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಸಂಸದರು, ನೂತನ ಕಟ್ಟಡದ ಪೂರ್ಣಗೊಳಿಸುವಿಕೆಗೆ ತಮ್ಮ ಸಂಸದರ ನಿಧಿಯಿಂದ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಅಭಿಷೇಕ್, ಕಾರ್ಯದರ್ಶಿ ನವೀನ್ ಹಾಗೂ ಸ್ಥಳೀಯ ಮುಖಂಡರು, ಹೈನುಗಾರರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
