ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ಸ್ವಾಗತಿಸಿ ಸಂಸದ ಯದುವೀರ್ ಒಡೆಯರ್

Aug 25, 2025 - 17:05
Aug 25, 2025 - 17:07
 0  449
ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ಸ್ವಾಗತಿಸಿ ಸಂಸದ ಯದುವೀರ್ ಒಡೆಯರ್

ವಿರಾಜಪೇಟೆ:- ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಅಕ್ರೋಶ ವ್ಯಕ್ತವಾಗುತ್ತಿರುವ ಹಿನ್ನಲೆ, ಇದೀಗಾ ಕೊಡಗು ಮೈಸೂರು ಸಂಸದ ಯದುವೀರ್ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದು ಸ್ವಾಗತ ಮಾಡುತ್ತೇನೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಅವರು ಸ್ವಾಗತಿಸಿದ್ದಾರೆ.

ಕೊಡಗಿನ ವಿರಾಜಪೇಟೆಯಲ್ಲಿ ಮಾತಾನಾಡಿದ ಸಂಸದ ಯದುವೀರ್‌ ಅವರು‌, ಖ್ಯಾತ ಬರಹಗಾರರ್ತಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ.ಜೊತೆಗೆ ಸಾಮಾಜಿಕ ಹೋರಾಟ ಮಾಡಿಕೊಂಡಿದ್ದಾರೆ.ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು.ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು‌ ಈ ಹಿಂದೆ ಸಾಮಾಜಿಕ ಬಹಿಷ್ಕಾರ ಕೂಡ ಅವರು ಎದುರಿಸಿದ್ದಾರೆ. ಕನ್ನಡ ಭಾಷೆ ಕನ್ನಡ ಸಾಹಿತ್ಯಕ್ಕಾಗಿ ಕೊಟ್ಟಿರುವ ಕೊಡುಗೆಗೆ ಅಪಾರವಾಗಿದೆ. ಅವರನ್ನು ರಾಜ್ಯ ಸರ್ಕಾರ ಅಯ್ಕೆ ಮಾಡಿರುವುದಕ್ಕೆ ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದರು. ಇನ್ನೂ ಬಿಜೆಪಿ ನಾಯಕರು ಧಾರ್ಮಿಕ ಕಾರ್ಯಕ್ರಮದಲ್ಲಿ ಬಾನು ಮುಷ್ತಾಕ್ ಅವರನ್ನು ಅಯ್ಕೆ ಮಾಡಿರುವ ಬಗ್ಗೆ ವಿರೋಧ ವ್ಯಕ್ತ ಪಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ ಇದು ಜಾತ್ಯತೀತ ವ್ಯವಸ್ಥೆಯಾಗಿದೆ.

ಧಾರ್ಮಿಕ ಪೂಜೆಗಳು ನಮ್ಮ ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಒಂದು ಉತ್ಸವ ಮಾಡುವ ಹಾಗೆ ಇದ್ದಾರೆ ಮಾಡಿಕೊಳ್ಳಿ ಅವರ ಆಯ್ಕೆ ಬಗ್ಗೆ ನಮ್ಮ ವಿರೋಧ ಯಾವುದು ಇಲ್ಲ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಸಂಸದ ಯದುವೀರ್ ತಿರುಗೇಟು ನೀಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0