ಮಡಿಕೇರಿ& ಸೋಮವಾರಪೇಟೆ: ಬೀದಿ ನಾಯಿ ಹಾವಳಿ, ಮಾಹಿತಿ ನೀಡಲು ಮನವಿ

ಮಡಿಕೇರಿ& ಸೋಮವಾರಪೇಟೆ: ಬೀದಿ ನಾಯಿ ಹಾವಳಿ, ಮಾಹಿತಿ ನೀಡಲು ಮನವಿ

ಮಡಿಕೇರಿ ನ.17:-ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರಿಗೆ ಈ ಮೂಲಕ ತಿಳಿಸುವುದೇನೆಂದರೆ ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮಡಿಕೇರಿ ನಗರಸಭೆ ಆರೋಗ್ಯ ಶಾಖೆ, ಆರೋಗ್ಯ ನಿರೀಕ್ಷಕರು ಮೊಬೈಲ್ ಸಂಖ್ಯೆ 9900526762 ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡುವುದು. ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು.

ಮಡಿಕೇರಿ ನಗರಸಭೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

 ಸೋಮವಾರಪೇಟೆ ವರದಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರಿಗೆ ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿರವರಿಗೆ ತಿಳಿಸುವುದು.

ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.

ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಸರ್ವೋಚ್ಛ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರು ತಿಳಿಸಿದ್ದಾರೆ.