ಮಡಿಕೇರಿ: ಕೆಪಿಎಸ್-ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ, ಆದೇಶವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಕೇಷನ್ ಪ್ರತಿಭಟನೆ

Nov 24, 2025 - 16:17
 0  213
ಮಡಿಕೇರಿ: ಕೆಪಿಎಸ್-ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ, ಆದೇಶವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಕೇಷನ್ ಪ್ರತಿಭಟನೆ

ಮಡಿಕೇರಿ: ಕೆಪಿಎಸ್-ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ಆದೇಶವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಕೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

 ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾ ನಿರತರು ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ 700 ಕೆಪಿಎಸ್-ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದೆ. ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ, ಮ್ಯಾಗ್ನೆಟ್ ಶಾಲೆಯ 3 ರಿಂದ 5 ಕಿಲೋ ಮೀಟರ್ ವ್ಯಾಪ್ತಿಯ ಶಾಲೆಗಳನ್ನು ಈ ಶಾಲೆಗಳಲ್ಲಿ ಸಮ್ಮಿಳಿತಗೊಳಿಸಲಾಗುತ್ತದೆ.

ಈಗಾಗಲೇ ಈ ಮಾದರಿಯಲ್ಲಿ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಸರ್ಕಾರಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ,77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ವಿದ್ಯಾರ್ಥಿಗಳಿರುವ ಕನ್ನಿದೊಡ್ಡಿ ಶಾಲೆ, 31 ವಿದ್ಯಾರ್ಥಿಗಳಿರುವ ಅಮ್ಮಳ್ಳಿ ದೊಡ್ಡಿ ಶಾಲೆ, 100 ವಿದ್ಯಾರ್ಥಿಗಳಿರುವ ಸಂತೆಮೊಗೇನಹಳ್ಳಿ ಶಾಲೆ,20 ವಿದ್ಯಾರ್ಥಿಗಳಿರುವ ಮೊಗೇನಹಳ್ಳಿ ದೊಡ್ಡಿ, 80 ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ ಕೆಸ್‌ಪಿಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ ನೀಡಲಾಗಿದೆ.

 ಇದು ಖಂಡನಿಯ. ಇದೇ ರೀತಿ 700 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ ಸಾವಿರಾರು ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯದ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ. ಪ್ರತಿ ಗ್ರಾಮಪಂಚಾಯತಿಗೆ ಒಂದರಂತೆ 5600 ಕೆಪಿಎಸ್-ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸುವ ಉದ್ದೇಶವನ್ನು ರಾಜ್ಯ ಸರ್ಕಾರವು ಹೊಂದಿದೆ. ಹೀಗಾದಲ್ಲಿ ಸರ್ಕಾರಿ ಪದವಿ ಕಾಲೇಜು ಸೇರಿದಂತೆ 40 ಸಾವಿರ ಸರ್ಕಾರಿ ಶಾಲೆಗಳು ಮುಚ್ಚಿಹೋಗುವ ಅಪಾಯಕ್ಕೆ ತುತ್ತಾಗುತ್ತವೆ ಎಂದು ಪ್ರತಿಭಟನಾ ನಿರತರು ಆತಂಕ ವ್ಯಕ್ತಪಡಿಸಿದರು.

ಸರ್ಕಾರವು ಕೂಡಲೇ ಕೆಪಿಎಸ್-ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು ಮತ್ತು ಶಿಕ್ಷಕರ ನೇಮಕಾತಿಯನ್ನು ಖಾತ್ರಿಪಡಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸರ್ಕಾರಿ ಶಾಲೆಗಳನ್ನು ರಕ್ಷಿಸಿ ಬಲಪಡಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಕೇಷನ್ ಪ್ರಮುಖರು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0