ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ
admincoorgdaily

ಮಡಿಕೇರಿ ಜೂ.16:-ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಸಹಾಯಕಿ ಹುದ್ದೆಗಳಿಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್‍ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಪೂರಕ ದಾಖಲಾತಿಯೊಂದಿಗೆ ಜೂನ್, 22 ರೊಳಗೆ ಕಚೇರಿ ವೇಳೆ ಸಂಜೆ 5.30ರ ಒಳಗೆ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿಯಲ್ಲಿ ದೂ.ಸಂ.08272-295087 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.