ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಪ್ರತಿಭಟನೆ
admincoorgdaily

ಮಡಿಕೇರಿ;ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮಡಿಕೇರಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಪಂಚ ರಾಜ್ಯಗಳ ಚುನಾವಣೆ ಮುಗಿದ ಬಳಿಕ ಇದೀಗ ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ ಮಾಡಿದ್ದು ಖಂಡನೀಯವೆಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಈಗಾಗಲೇ ದೇಶದಲ್ಲಿ ಗ್ಯಾಸ್ ಅಭಾವ ಸೃಷ್ಟಿಯಾಗಿ ಸರಿಯಾದ ಸಮಯಕ್ಕೆ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಗ್ಯಾಸ್ ಸರಬರಾಜು ಆಗುತ್ತಿಲ್ಲ.ಏತನ್ಮಧ್ಯೆ ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ ಮಾಡಿದ್ದು,ಸಣ್ಣಪುಟ್ಟ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕವನ್ ಕೊತ್ತೋಳಿ, ಕೊಡಗು ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮೈಸಿ ಕತ್ತಣ್ಣೀರ, ರಾಹುಲ್ ಮಾರ್ಶಲ್, ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷರಾದ ದಿನೇಶ್ ಕೆಆರ್ ಮಡಿಕೇರಿ ನಗರ ಕಾಂಗ್ರೆಸ್ ನ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾದ ವಿಜಿ ಮೋಹನ್, ಪ್ರಧಾನ ಕಾರ್ಯದರ್ಶಿ ಕೋಚನ ಹರಿಪ್ರಸಾದ್ ಹಾಗೂ, ನಗರ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.