ಮಡಿಕೇರಿ:ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ವತಿಯಿಂದ ಡಿ.7 ಮತ್ತು ಡಿ.14ರಂದು 4ನೇ ವರ್ಷದ ವಿಪ್ರ ಕ್ರೀಡೋತ್ಸವ

Dec 2, 2025 - 16:40
 0  138
ಮಡಿಕೇರಿ:ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ವತಿಯಿಂದ ಡಿ.7 ಮತ್ತು ಡಿ.14ರಂದು 4ನೇ ವರ್ಷದ ವಿಪ್ರ ಕ್ರೀಡೋತ್ಸವ

ಮಡಿಕೇರಿ: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಮಡಿಕೇರಿ ವತಿಯಿಂದ ಡಿ.೭ ಮತ್ತು ಡಿ.೧೪ರಂದು ೪ನೇ ವರ್ಷದ ವಿಪ್ರ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ಮೂಗೂರು ರಾಮಚಂದ್ರ ತಿಳಿಸಿದ್ದಾರೆ.

ವಿಪ್ರ ಕ್ರೀಡೋತ್ಸವ ವರ್ಷಂಪ್ರತಿ ಹಮ್ಮಿಕೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ನೇತೃತ್ವದಲ್ಲಿ ತಾಲೂಕು ಬ್ರಾಹ್ಮಣ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ. ನಗರದ ಮ್ಯಾನ್ಸ್ ಕಾಂಪೌಂಡ್‌ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಶೆಟಲ್ ಹಾಗೂ ಟೇಬಲ್ ಟೆನಿಸ್ ಪಂದ್ಯಾಟ ಡಿ.೭ರಂದು ನಡೆಯಲಿದೆ.

 ವಿವಿಧ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ ಎಂದು ತಿಳಿಸಿದರು. ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ, ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿ.೧೪ರಂದು ಕ್ರಿಕೆಟ್ ಪಂದ್ಯಾಟ ಹಾಗೂ ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಪಂದ್ಯಾಟ ನಡೆಯಲಿದೆ. ತಾಲೂಕು ಮಟ್ಟದಲ್ಲಿ ಟೆಸ್ ಮತ್ತು ಕೇರಂ ವಿಭಾಗದಲ್ಲಿ ಜಯ ಸಾಧಿಸಿದವರಿಗೆ ಜಿಲ್ಲಾಮಟ್ಟದ ಪಂದ್ಯಾಟ ಜನರವರಿಯಲ್ಲಿ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಉಪಾಧ್ಯಕ್ಷ ಭರತೀಶ್, ಪ್ರಮುಖರಾದ ಅರುಣ್ ಕುಮಾರ್, ಶ್ಯಾಮಲ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1