ಮಡಿಕೇರಿ:ರಾಹುಲ್-ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮಡಿಕೇರಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಂತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ರಸ್ತೆ ತಡೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಮೈತ್ರಿಹಾಲ್‌ಗೆ ಕರೆದೊಯ್ದು ಬಿಡುಗಡೆ ಮಾಡಿದರು.ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಹಕ್ಕುಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ ಕೇಂದ್ರ ಸರ್ಕಾರ, ಈಗ ವಿರೋಧ ಪಕ್ಷದ ನಾಯಕರನ್ನು ಬಂಧಿಸಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಂಧಿತ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಹಗರಣಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯ, ಜಿಲ್ಲಾ, ಹೋಬಳಿ ಮಟ್ಟದಲ್ಲಿ ಬೃಹತ್ ಆಂದೋಲನ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಪಿ ಶಶಿಧರ್,ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ,ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ,ಹಿರಿಯ ಕಾಂಗ್ರೆಸ್ ಮುಖಂಡ ಟಿ.ಪಿ ರಮೇಶ್,ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು,ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಂಗ್ರೆಸ್ ಉಪಾಧ್ಯಕ್ಷ ಆರ್.ಕೆ ಅಬ್ದುಲ್ ಸಲಾಂ, ಸೇರಿ ಮತ್ತಿತರರು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
