ಮಡಿಕೇರಿ;ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು; ಸಚಿವ ಹೆಚ್‌.ಸಿ ಮಹದೇವಪ್ಪ

Feb 22, 2026 - 16:34
 0  256
ಮಡಿಕೇರಿ;ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು;  ಸಚಿವ ಹೆಚ್‌.ಸಿ ಮಹದೇವಪ್ಪ

ಮಡಿಕೇರಿ: ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಕೂಗು ಇನ್ನೂ ಮುಟ್ಟಿಲ್ಲ. ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದಲ್ಲಿ ಇರೋದ್ರಿಂದ, ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು.

ಸಿದ್ದರಾಮಯ್ಯ ಹೈಕಮಾಂಡ್‌ ಹಾದಿಯಾಗಿ ಸೂಕ್ತ ದಲಿತ ಅಭ್ಯರ್ಥಿಯನ್ನ ಆಯ್ಕೆ ಮಾಡಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕು ಎಂದು ಮನವಿ ಮಾಡಿದ್ದಾರೆ. ದಲಿತ ನಾಯಕರ ಆಯ್ಕೆಯಲ್ಲಿ ಯಾವುದೇ ಗೊಂದಲಗಳು ಇರಬಾರದು. ಏಕೆಂದ್ರೆ ದಲಿತರು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಇದ್ದಾರೆ.

ಸದಾ ಕಾಂಗ್ರೆಸ್‌ನೊಂದಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಕಾಂಗ್ರೆಸ್‌ನ ಬೆನ್ನೆಲುಬು ಕಳೆದುಕೊಂಡು ಪಕ್ಷ ಬಲವಾಗಿ ಇರಲು ಸಾಧ್ಯವಿಲ್ಲ. ಹೀಗಾಗಿ ಬೆನ್ನೆಲುಬು ಬಲ ಪಡಿಸಬೇಕು ಎಂದರೆ ದಲಿತ ನಾಯಕರು ಸಿಎಂ ಆಗಬೇಕೆಂಬ ತೀರ್ಮಾನ ಆಗಬೇಕು. ಹೈಕಮಾಂಡ್‌ ಕೂಡ ಇದನ್ನ ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದ್ದಾರೆ.

ಇನ್ನೂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ತನಗೆ ಸರಿಯಾದ ರೀತಿಯಲ್ಲಿ ತನ್ನ ಶ್ರಮಕ್ಕೆ ಸ್ಥಾನಮಾನ ಕೋಡುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಯೊಬ್ಬರಲ್ಲೂ ಅಸೆ ಆಕಾಂಕ್ಷೆಗಳು ಇರುತ್ತವೆ. ಅದಕ್ಕೆ ತಪ್ಪು ಎಂದು ಹೇಳಲು ಆಗೋಲ್ಲ. ಆದರೆ ಪ್ರತಿಯೊಂದನ್ನು ಹೈಕಮಾಂಡ್ ಪರಾಮರ್ಶೆ ಮಾಡುತ್ತದೆ ಎಂದಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 1
Wow Wow 0