Kodagu

ಮಡಿಕೇರಿ ದಸರಾ ಕ್ರೀಡಾಕೂಟ: ಕಬಡ್ಡಿ ಪಂದ್ಯಾವಳಿಗೆ ಚಾಲನೆ

admincoorgdaily

ಮಡಿಕೇರಿ:ನಗರ ದಸರಾ ಕ್ರೀಡಾ ಸಮಿತಿ (ರಿ.) ದಸರಾ ಕ್ರೀಡಾಕೂಟ 2025 ಇವರ ವತಿಯಿಂದ ಆಯೋಜಿಸಿದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರುಭಾಗವಹಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಶ್ರೀ ಮಂತರ್ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಹಾಗೂ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.