ಮಡಿಕೇರಿ ದಸರಾ ಜನೋತ್ಸವ: ವಾಹನ ಸಂಚಾರದಲ್ಲಿ ಬದಲಾವಣೆ
ಮಡಿಕೇರಿ:ಅಕ್ಟೋಬರ್ 02ರಂದು ಮಡಿಕೇರಿ ನಗರದಲ್ಲಿ ನಡೆಯಲಿರುವ ದಸರಾ ಉತ್ಸವದ ಸಂಬಂಧ ದಿನಾಂಕ 02-10-2025 ರಂದು ರಾತ್ರಿ ಮಡಿಕೇರಿ ನಗರದ ಹತ್ತು ದೇವಸ್ಥಾನಗಳ ವತಿಯಿಂದ ದಶ ಮಂಟಪಗಳ ಮೆರವಣಿಗೆ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ನಡೆಯಲಿದೆ. ಅಲ್ಲದೇ ನಾಲ್ಕು ದೇವಸ್ಥಾನದ ವತಿಯಿಂದ ಕರಗಗಳ ಮೆರವಣಿಗೆಯು ನಡೆಯಲಿದೆ.
ಹತ್ತು ಮಂಟಪ ಮತ್ತು ನಾಲ್ಕು ಕರಗಗಳ ಮೆರವಣಿಗೆಯು ದಿನಾಂಕ 02-10-2025 ರಂದು ಸಂಜೆ 06:00 ಗಂಟೆಯ ನಂತರ ಸಂಬಂಧಪಟ್ಟ ದೇವಸ್ಥಾನದಿಂದ ಪ್ರಾರಂಭವಾಗಿ ಬನ್ನಿಮಂಟಪಕ್ಕೆ ತೆರಳಿ ದಿನಾಂಕ 03-10-2025ರ ಬೆಳಿಗ್ಗೆ 08:00 ಗಂಟೆಯ ನಂತರ ವಾಪಾಸ್ಸು ಆಯಾಯಾ ದೇವಸ್ಥಾನಕ್ಕೆ ಹಿಂತಿರುಗಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷ ಸಾರ್ವಜನಿಕರು ಪಾಲ್ಗೊಳ್ಳಲಿರುವ ಬಗ್ಗೆ ಮಾಹಿತಿ ಇದ್ದು,
ಮಡಿಕೇರಿ ನಗರ ದಸರಾ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಜನರು ಹಾಗೂ ಗೋಣಿಕೊಪ್ಪದಲ್ಲಿ ನಡೆಯಲಿರುವ ದಸರಾ ಕಾರ್ಯಕ್ರಮಕ್ಕೆ ಸುಮಾರು ಇಪ್ಪತ್ತ್ತು ಸಾವಿರಕ್ಕೂ ಮೇಲ್ಪಟ್ಟು ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಈ ಸಂಬಂಧ ಮಡಿಕೇರಿ ನಗರ ಹಾಗೂ ಗೋಣಿಕೊಪ್ಪ ಪಟ್ಟಣದಲ್ಲಿ ವಾಹನಗಳ ಓಡಾಟ ಮತ್ತು ನಿಲುಗಡೆಯನ್ನು ನಗರದೊಳಗೆ ನಿಷೇಧಿಸಬೇಕಾಗಿರುವುದರಿಂದ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಬೇಕಾಗಿರುತ್ತದೆ.
ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಸಂಚಾರ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ನಾಡ ಹಬ್ಬ ದಸರಾ ಉತ್ಸವ ಶಾಂತ ರೀತಿಯಿಂದ ನಡೆಯುವ ಸಲುವಾಗಿ ದಿನಾಂಕ 02-10-2025 ರಂದು ಸಂಜೆ 04.00 ಗಂಟೆಯಿಂದ ದಿನಾಂಕ 03-10-2025 ರಂದು ಬೆಳಿಗ್ಗೆ 10.00 ಗಂಟೆಯವರೆಗೆ ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ತಾತ್ಕಾಲಿಕ ವಾಹನ ಸಂಚಾರದ ಮಾರ್ಗ ಬದಲಾವಣೆಯ ಅಧಿಸೂಚನೆ ಹೊರಡಿಸಲು ಉಲ್ಲೇಖದ ಪತ್ರದಲ್ಲಿ ಆರಕ್ಷಕ ಅಧೀಕ್ಷಕರು ಕೋರಿದ್ದಾರೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ವಾಹನಗಳ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡುವುದು ಸೂಕ್ತವೆಂದು ಮನಗಂಡು ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ದಿನಾಂಕ 02-10-2025 ರಂದು ಮಧ್ಯಾಹ್ನ 2.00 ಗಂಟೆಯಿಂದ ದಿನಾಂಕ 03-10-2025 ಬೆಳಿಗ್ಗೆ 10.00 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.
ದಿನಾಂಕ 02-10-2025 ರಂದು ಮಧ್ಯಾಹ್ನ 2.00 ಗಂಟೆಯಿಂದ ದಿನಾಂಕ 03-10-2025 ಬೆಳಿಗ್ಗೆ 10.00 ಗಂಟೆಯವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬಿಳಿಕೆರೆ, ಕೆ.ಆರ್.ನಗರ, ಹೊಳೆನರಸೀಪುರ ಹಾಸನ ಸಕಲೇಶಪುರ ಮಾರ್ಗವಾಗಿ ಸಂಚರಿಸುವುದು.
ದಿನಾಂಕ 02-10-2025 ರಂದು ಸಮಯ ಸಂಜೆ 4.00 ಗಂಟೆಯಿಂದ ದಿನಾಂಕ 03-10-2025 ರಂದು ಬೆಳಿಗ್ಗೆ 10.00 ಗಂಟೆಯವರೆಗೆ ಮಡಿಕೇರಿ ನಗರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ.
ಮಡಿಕೇರಿ ನಗರ ವಾಹನ ಸಂಚಾರಗಳ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯ ವಿವರ:
1) ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಮುಂದುವರೆದು ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು.
2) ಮೈಸೂರು ರಸ್ತೆ ಮತ್ತು ಸಿದ್ದಾಪುರ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಚೈನ್ ಗೇಟ್ ಮುಖಾಂತರ ತೆರಳಿ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು.
3) ವಿರಾಜಪೇಟೆ, ಮೂರ್ನಾಡು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಮೇಕೇರಿ ಶಾಲಾ ಮೈದಾನದಲ್ಲಿ ನಿಲುಗಡೆಗೊಳಿಸುವುದು.
4) ಮಂಗಳೂರು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ನೇತಾಜಿ ಮೈದಾನ ಮತ್ತು ದುರ್ಗ ಭಗವತಿ ದೇವಸ್ಥಾನ ಮೈದಾನದಲ್ಲಿ ನಿಲುಗಡೆಗೊಳಿಸುವುದು.
5) ಗಾಳಿಬೀಡು ಅಬ್ಬಿಪಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು.
6) ಭಾಗಮಂಡಲ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ಪಪ್ಪೀಸ್ ಗ್ಲಾಸ್ ಹೌಸ್ ಮೈದಾನದಲ್ಲಿ ನಿಲುಗಡೆಗೊಳಿಸುವುದು.
7) ಮೈಸೂರು, ಸಿದ್ದಾಪುರ, ಕಡೆಯಿಂದ ಬರುವ ದ್ವಿಚಕ್ರ ವಾಹನಗಳ ನಿಲುಗಡೆಗೆ ಮೈಸೂರು ರಸ್ತೆಯ ಈಸ್ಟ್ ಎಂಡ್ ಹೋಟೆಲ್ ಮುಂಭಾಗದಲ್ಲಿರುವ ಶಾಂತಿ ಚರ್ಚ್ ಮೈದಾನದಲ್ಲಿ ನಿಲುಗಡೆ ಮಾಡುವುದು.
8) ನಗರದಲ್ಲಿರುವ ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆ ಮತ್ತು ನಗರದ ಮದ್ಯಭಾಗದಲ್ಲಿರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸದೇ ತಮ್ಮ ವಾಹನಗಳನ್ನು ಕ್ರೆಸೆಂಟ್ ಶಾಲೆ ಮೈದಾನ, ಹಿಂದೂಸ್ಥಾನ್ ಸ್ಕೂಲ್ ಮೈದಾನ, ಅಥಾವ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನಿಲುಗಡೆಗೊಳಿಸುವುದು.
9) ದಿನಾಂಕ 02-10-2025 ರಂದು ಸಮಯ ಸಂಜೆ 4.00 ಗಂಟೆಯಿಂದ ದಿನಾಂಕ 03-10-2025ರ ಬೆಳಿಗ್ಗೆ 10.00 ಗಂಟೆಯವರೆಗೆ ನಗರದೊಳಗೆ ಇರುವ ಎಲ್ಲಾ ರಸ್ತೆಗಳು ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ.
ಸಂಪಿಗೆ ಕಟ್ಟೆಯಿಂದ ಉಕ್ಕುಡ ಮಹದೇವಪೇಟೆ, ಎ.ವಿ ಸ್ಕೂಲ್ ಜಂಕ್ಷನ್, ಕಾನ್ವೆಂಟ್ ಜಂಕ್ಷನ್ ವರೆಗಿನ ರಸ್ತೆಗಳು ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ. ಹೊಸ ಖಾಸಗಿ ಬಸ್ಸು ನಿಲ್ದಾಣದಿಂದ ರೇಸ್ ಕೋರ್ಸ ರಸ್ತೆಗಾಗಿ ರಾಜಸೀಟ್ ರಸ್ತೆಯ ಮುಖಾಂತರ ಮಾಂಗೇರಿರಾ ಮುತ್ತಣ ರಸ್ತೆಯವರೆಗೂ ಮತ್ತು ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆಯಲ್ಲಿ 03-10-2025 ರ ಸಂಜೆ 4.00 ಗಂಟೆಯವರೆಗೂ ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ.
10. ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ತಾತ್ಕಾಲಿಕವಾಗಿ ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಆರ್.ಎಂ.ಸಿಯನ್ನು ಬಸ್ಸು ನಿಲ್ದಾಣವಾಗಿ ಮಾರ್ಪಾಡಿಸಿಕೊಳ್ಳುವುದು ಮತ್ತು ನಗರದೊಳಗೆ ಸಂಚರಿಸದಂತೆ ವ್ಯವಸ್ಥೆ ಮಾಡಿಕೊಳ್ಳುವುದು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು.
11. ಖಾಸಗಿ ಬಸ್ಸುಗಳು ನಗರದೊಳಗೆ ಆಗಮಿಸದೇ ಜಿಟಿ ವೃತ್ತದಲ್ಲಿಯೇ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿ ತೆರಳುವುದು. ಮತ್ತು ಖಾಸಗಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು.