ಮಡಿಕೇರಿ:ಹ್ಯೂಂಡಾಯ್ ಕಾರ್ ಶೋರೂಮ್‍ನಲ್ಲಿ ಖಾಲಿ ಹುದ್ದೆಗಳಿಗೆ ನಾಳೆ ನೇರ ಸಂದರ್ಶನ

Jul 23, 2026 - 19:49
 0  136
ಮಡಿಕೇರಿ:ಹ್ಯೂಂಡಾಯ್ ಕಾರ್ ಶೋರೂಮ್‍ನಲ್ಲಿ ಖಾಲಿ ಹುದ್ದೆಗಳಿಗೆ ನಾಳೆ ನೇರ ಸಂದರ್ಶನ

ಮಡಿಕೇರಿ ಜು.23:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಡಿಕೇರಿ ಹ್ಯೂಂಡಾಯ್ ಕಾರ್ ಶೋರೂಮ್‍ನಲ್ಲಿ ಜುಲೈ, 24 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಹ್ಯೂಂಡಾಯ್ ಕಾರ್ ಶೋರೂಮ್, ಮಡಿಕೇರಿ. ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ – 8296020826 ಇವರನ್ನು ಸಂಪರ್ಕಿಸಬಹುದಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0