ಮಡಿಕೇರಿ;ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಪ್ರತಿಮೆ ನವೀಕರಣ ಶಾಸಕ ಎಎಸ್ ಪೊನ್ನಣ್ಣ ಪರಿಶೀಲನೆ, ಮೆಚ್ಚುಗೆ
admincoorgdaily

ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿ ಸುದರ್ಶನ ವೃತ್ತದ ಬಳಿ ಇರುವ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ರವರ ಪುತ್ತಳಿ ಸ್ಮಾರಕಕ್ಕೆ ಭೇಟಿ ನೀಡಿದರು.
ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಪುತ್ತರಿರ ಪಪ್ಪು ತಿಮ್ಮಯ್ಯ,ಹಾಗೂ ಪಾಲೆಂಗಡ ಅಮಿತ್, ರವರು ಪುತ್ತಳಿ ಆವರಣವನ್ನು ನವೀಕರಣಗೊಳಿಸುತ್ತಿದ್ದು ಇದನ್ನು ವೀಕ್ಷಿಸಿದ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ವೀಣಾ ಅಚ್ಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಲಕ್ಶ್ಮಣ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.