Kodagu

ಮಡಿಕೇರಿ:ಕಾಟಕೇರಿ ಹರ್ ಮಂದಿರ್ ಶಾಲೆಯ ವಸತಿ ಗೃಹದಲ್ಲಿ ಬೆಂಕಿ ಅವಘಡ: ಒಬ್ಬ ವಿದ್ಯಾರ್ಥಿ ಸಜೀವ ದಹನ

admincoorgdaily

ಮಡಿಕೇರಿ:ತಾಲೂಕಿನ ಕಾಟಕೇರಿ ಹರ್ ಮಂದಿರ್ ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಬ್ಬ ವಿದ್ಯಾರ್ಥಿ ಜೀವಂತ ದಹನವಾಗಿದ್ದು ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್ (7) ಎಂದು ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ಚೆಟ್ಟಿಮಾನಿ ನಿವಾಸಿ ಎಂದು ಗುರುತಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಇಂದು ಮುಂಜಾನೆ ಮೂರು ಗಂಟೆ ಸಮಯದಲ್ಲಿ ಬೆಂಕಿ ಅವಘಡ ನಡೆದಿದೆ. ಅಗ್ನಿ ಶಾಮಕದಳ ಹಾಗೂ ಗ್ರಾಮಸ್ಥರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು,ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ.