ಮಡಿಕೇರಿ: ಅ.12ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಮಡಿಕೇರಿ: ಮಳೆ ಹಿನ್ನೆಲೆ ಮುಂದೂಡಲಾಗಿದ್ದ ಕಬಡ್ಡಿ ಪಂದ್ಯಾಟವನ್ನು ಅ.೧೨ರಂದು ಮಡಿಕೇರಿ ನಗರದ ದಸರಾ ಸಮಿತಿ ಮತ್ತು ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ವತಿಯಿಂದ ನಗರದ ಗಾಂದಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಕೌಟ್ ಮಾದರಿಯಲ್ಲಿ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆಯಲಿದೆ. ಪುರುಷ ವಿಭಾಗಕ್ಕೆ ೧೦,೦೦೦, ಮಹಿಳೆಯರ ವಿಭಾಗಕ್ಕೆ ೨,೦೦೦ ಮೈದಾನ ಶುಲ್ಕ ನಿಗದಿಪಡಿಸಲಾಗಿದೆ. ಸುಮಾರು ೧೦-೨೦ ತಂಡಗಳು ಆಗಮಿಸುವ ನಿರೀಕ್ಷೆಯಿದೆ. ಪುರುಷ ವಿಭಾಗದಲ್ಲಿ ಪ್ರಥಮ ಬಹುಮಾನ ೧,೦೦,೦೦೧, ದ್ವಿತೀಯ ೫೦,೦೦೧, ತೃತೀಯ ೨೫,೦೦೧ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು.
ಮಹಿಳೆಯ ವಿಭಾಗದಲ್ಲಿ ಪ್ರಥಮ ೧೫,೦೦೧, ದ್ವಿತೀಯ ೧೦,೦೦೧ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು.
ಅ.೧೨ರ ಮಧ್ಯಾಹ್ನ ೨ ಗಂಟೆಗೆ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಎಸ್‌ಪಿ ರಾಮರಾಜನ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್, ಕೊಡಗು ಪತ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ ಸೇರಿದಂತೆ ದಸರಾ ಸಮಿತಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಸಮಿತಿ ಗೌರವಾಧ್ಯಕ್ಷ ಕೆ.ಆರ್.ರವಿ, ಉಪಾಧ್ಯಕ್ಷ ಕೆ.ಆರ್.ದಿನೇಶ್, ಸಹ ಕಾಯದರ್ಶಿ ನಿರಂಜನ್, ಕ್ರೀಡಾ ಸಂಚಾಲಕ ಕಾವೇರಿಮನೆ ಭರತ್, ಸದಸ್ಯರಾದ ಉಮೇಶ್ ಕುಮಾರ್ ಹಾಜರಿದ್ದರು.