Kodagu

ಮಡಿಕೇರಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂಧನ ಸೋರಿಕೆ

admincoorgdaily

ಮಡಿಕೇರಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂಧನ ಸೋರಿಕೆ

ಮಡಿಕೇರಿ;ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿ ಬಳಿ ರಸ್ತೆಯಲ್ಲಿ ಇಂಧನ ಸೋರಿಕೆಯಾಗಿದ್ದು,ಇಂಧನ ಸೋರಿಕೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು.

ಹೆದ್ದಾರಿಯ ಮೇಲೆ ಹರಿದ ಇಂಧನದಿಂದ ವಾಹನ ಸವಾರರ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು ಸ್ಥಳಕ್ಕೆ ಮಡಿಕೇರಿ ಟ್ರಾಫಿಕ್ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿ, ರಸ್ತೆಯನ್ನು ಶುಚಿಗೊಳಿಸಿದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮಡಿಕೇರಿ ಟ್ರಾಫಿಕ್ ಪೊಲೀಸರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.