ಮಡಿಕೇರಿ: ನಾಳೆ‌ ಕರಗ ಉತ್ಸವ

ಮಡಿಕೇರಿ: ನಾಳೆ‌ ಕರಗ ಉತ್ಸವ

ಮಡಿಕೇರಿ :-ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗಗಳನ್ನು ಸೆಪ್ಟೆಂಬರ್, 22 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವುದು. ಮಡಿಕೇರಿ ನಗರದ ಹಾಗೂ ರಾಜ್ಯದ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ವರ್ಷದ ದಸರಾ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಸಹಕಾರ ನೀಡುವಂತೆ ಮಡಿಕೇರಿ ನಗರ ದಸರಾ ಸಮಿತಿ ಹಾಗೂ ನಗರಸಭೆ ಅಧ್ಯಕ್ಷರು ತಿಳಿಸಿದ್ದಾರೆ.