ಮಡಿಕೇರಿ; ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಫೆ.28 ರಂದು ಸಂವಿಧಾನ ಮತ್ತು ಪತ್ರಿಕೋದ್ಯಮ ವಿಚಾರ ಸಂಕಿರಣ

ಮಡಿಕೇರಿ; ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಫೆ.28 ರಂದು ಸಂವಿಧಾನ ಮತ್ತು ಪತ್ರಿಕೋದ್ಯಮ ವಿಚಾರ ಸಂಕಿರಣ

ಮಡಿಕೇರಿ ಫೆ.26:-ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಡಗು ಇವರ ಸಹಯೋಗದಲ್ಲಿ ಸಂವಿಧಾನ ಮತ್ತು ಪತ್ರಿಕೋದ್ಯಮ ಬಗ್ಗೆ ವಿಚಾರ ಸಂಕಿರಣ, ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂ ನಲ್ಲಿ ಎಐ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಕುರಿತು ತರಬೇತಿ ಕಾರ್ಯಕ್ರಮವು ಫೆ.28 ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

 ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎಂ.ಎ.ಪೊನ್ನಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಎಚ್.ಟಿ, ಮಡಿಕೇರಿ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಸವಿತಾ ರೈ ಉಪಸ್ಥಿತರಿರಲಿದ್ದಾರೆ.

ವಿಚಾರ ಸಂಕಿರಣ ಗೋಷ್ಠಿ 1 ರಲ್ಲಿ ಫ್ಯಾಕ್ಟ್ ಚೆಕ್ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಎಂಬ ವಿಷಯದ ಕುರಿತು ಹಿರಿಯ ಪತ್ರಕರ್ತರಾದ ಸಮೀವುಲ್ಲಾ, ಸುಧಾ ವಾರಪತ್ರಿಕೆಯ ಸಂಪಾದಕರಾದ ರಶ್ಮಿ ಎಸ್ ಹಾಗೂ ಗೋಷ್ಠಿ- 2ರಲ್ಲಿ ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂ ನಲ್ಲಿ ಎಐ ಎಂಬ ವಿಷಯದ ಕುರಿತು ದೆಹಲಿ ಪದವೀಧರರು ಹಾಗೂ ಎಐ ಪರಿಣಿತರಾದ ಐಐಟಿ ರಾಹುಲ್ ಗುಂಡಾಲ ಅವರು ವಿಚಾರ ಮಂಡಿಸಲಿದ್ದಾರೆ.

ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೊಡಗು ಜಿ.ಪಂ.ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಂ, ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಎನ್.ಎಸ್.ಮಹೇಶ್ ಇತರರು ಪಾಲ್ಗೊಳ್ಳಲಿದ್ದಾರೆ.