Kodagu

ಮಡಿಕೇರಿ: ಭಾರಿ ಮಳೆಗೆ ಭೂಕುಸಿತ, ಕೆ.ಎಸ್.ಆರ್.ಟಿ ಬಸ್ ನಿಲ್ದಾಣ ಬಳಿ ಒನ್ ವೇ ಸಂಚಾರ

admincoorgdaily

ಮಡಿಕೇರಿ: ಭಾರಿ ಮಳೆಗೆ ಭೂಕುಸಿತ, ಕೆ.ಎಸ್.ಆರ್.ಟಿ  ಬಸ್ ನಿಲ್ದಾಣ ಬಳಿ ಒನ್ ವೇ ಸಂಚಾರ

ಮಡಿಕೇರಿ;ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಭೂಕುಸಿತ ಸಂಭವಿಸಿದೆ.

ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಒನ್ ವೇ ವಾಹನ ಸಂಚಾರ ನಿಯಮವನ್ನು ಜಾರಿಗೆ ತರಲಾಗಿದೆ. ಮಡಿಕೇರಿ ನಗರ ಟ್ರಾಫಿಕ್ ಪೊಲೀಸರು ಈ ನಿಯಮವನ್ನು ಜಾರಿಗೆ ತಂದಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಹಳೆ ಖಾಸಗಿ ಬಸ್ ನಿಲ್ದಾಣದ ಕಡೆಗೆ ಮಾತ್ರ ವಾಹನ ಸಂಚರಿಸಲು ಅವಕಾಶ ನೀಡಲಾಗಿದೆ. ಪ್ರಯಾಣಿಕರು ಮತ್ತು ವಾಹನ ಸವಾರರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಮಳೆ ಮುಂದುವರಿದಿರುವುದರಿಂದ ಭೂಕುಸಿತದ ಪ್ರದೇಶದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗಿದೆ.