ದಾವಣಗೆರೆ ಉಪ ಚುನಾವಣೆ ಅಖಾಡಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಎಂಟ್ರಿ
ದಾವಣಗೆರೆ:ಇಲ್ಲಿನ ಕಾಂಗ್ರೆಸ್ ಚುನಾವಣಾ ಪ್ರಚಾರದ ಕಛೇರಿ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ ಅವರು,ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾದರು.
ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರಿದ್ದು ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ರವರು ದಾವಣಗೆರೆಗೆ ಭೇಟಿ ನೀಡಿದ್ದಾರೆ.
ದಾವಣಗೆರೆ ಕಾಂಗ್ರೆಸ್ ಚುನಾವಣಾ ಪ್ರಚಾರ ಕಛೇರಿಗೆ ನೀಡಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರದಲ್ಲಿ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
